ಕೆಂಪೇಗೌಡರ ಬಗ್ಗೆ ಮಾಹಿತಿ | Information about Kempegowda in Kannada

Join Telegram Group Join Now
WhatsApp Group Join Now

ಕೆಂಪೇಗೌಡರ ಬಗ್ಗೆ ಮಾಹಿತಿ Information about Kempegowda Kempegowda Mahiti in Kannada

ಕೆಂಪೇಗೌಡರ ಬಗ್ಗೆ ಮಾಹಿತಿ

Information about Kempegowda in Kannada

ಈ ಲೇಖನಿಯಲ್ಲಿ ಕೆಂಪೇಗೌಡರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ

ಕೆಂಪೇಗೌಡರು

ಕೆಂಪೇಗೌಡರನ್ನು ಸಾಮಾನ್ಯ ವ್ಯಕ್ತಿಯಾಗಿಯೋ ಅಥವಾ ರಾಜನಾಗಿಯೋ ಇವರನ್ನು ಊಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಅವರ ಆಡಳಿತಾವಧಿಯನ್ನು ಗಮನಿಸಿದರೆ ಅವರೊಬ್ಬ ಕೃಷಿತಜ್ಞ, ಶಿಕ್ಷಣತಜ್ಞ, ಆಡಳಿತಜ್ಞ, ಇಂಜಿನಿಯರ್, ವಾಣಿಜ್ಯೋದ್ಯಮಿ, ಕೈಗಾರಿಕೋದ್ಯಮಿ, ವಿಚಾರವಾದಿ, ವೈದ್ಯ, ಮನೋವೈದ್ಯ, ಜ್ಞಾನಿ, ವಿಜ್ಞಾನಿ, ಕಾಲಜ್ಞಾನಿ, ತಂತ್ರಜ್ಞ, ದಾರ್ಶನಿಕ, ಸಂತ, ಪವಾಡಪುರುಷ, ಯೋಜನಾನಿಪುಣ, ತತ್ವಜ್ಞಾನಿ, ಸಾರ್ವಭೌಮ ಹೀಗೆ ಹತ್ತಾರು ರೀತಿಯ ಪ್ರತಿಭೆಯ ಮಹಾಪರ್ವತದಂತೆ ಗೊಚರಿಸುತ್ತಾರೆ. ಹಾಗೆ ಇದ್ದಿದ್ದರಿಂದಲೇ ಬೆಂಗಳೂರನ್ನು ಕಟ್ಟಲು ಸಾಧ್ಯವಾಯಿತು ಎನ್ನುವುದನ್ನು ಇಂದಿನ ಪೀಳಿಗೆಯ ಜನರು ಒಪ್ಪಿಕೊಳ್ಳಲೇ ಬೇಕಾಗುತ್ತದೆ. ಅವತ್ತಿನ ಮಟ್ಟಿಗೆ ಒಂದು ನಗರ ಹೇಗಿರಬೇಕು ಮತ್ತು ನಗರಕ್ಕೆ ಬಹುಮುಖ್ಯವಾಗಿ ನೀರು ಬೇಕು ಎಂಬುದನ್ನು ಮನಗಂಡು ಅವರು 25 ಕೆರೆಗಳನ್ನು ನಿರ್ಮಿಸಿದ್ದರು. ಅದರಾಚೆಗೆ ಸಾವಿರಾರು ಕೆರೆಗಳನ್ನು ನಿರ್ಮಿಸಿ ಕೃಷಿಗೆ ನೀರೊದಗಿಸಿದ್ದರು. ಇನ್ನು ಕೆಂಪೇಗೌಡರ ಬಗ್ಗೆ ಹೇಳಬೇಕಾದರೆ ಕರ್ನಾಟಕದ ಒಂದಿಷ್ಟು ಇತಿಹಾಸವನ್ನು ಮೆಲುಕು ಹಾಕಲೇ ಬೇಕಾಗುತ್ತದೆ.

ಕೆಂಪೆಗೌಡರ ಬಾಲ್ಯ ಜೀವನ

ವಿಜಯನಗರ ಸಾಮ್ರಾಜ್ಯದ ಸಾಮಂತ ಅರಸರಲ್ಲೊಬ್ಬರಾದ ಇಮ್ಮಡಿ ಭೈರೇಗೌಡನ ನಂತರ ಆತನ ಪುತ್ರ ನಂಜಪ್ಪಗೌಡ ಪಟ್ಟಕ್ಕೆ ಬಂದ. ಅವನನ್ನು ಗಿಡ್ಡೇಗೌಡನೆಂದು ಕರೆಯಲಾಗಿದೆ. ನಂಜಪ್ಪಗೌಡನಿಗೆ ಬಹಳಕಾಲ ಮಕ್ಕಳಿರಲಿಲ್ಲ. ತಮ್ಮ ಕುಲದೇವತೆಯಾದ ಕುರುವಗೆರೆ ಕೆಂಪಮ್ಮನಿಗೆ ಹರಕೆ ಕಟ್ಟಿಕೊಂಡಿದ್ದರಿಂದ ದೇವಿಯ ಆಶೀರ್ವಾದದ ಫಲವಾಗಿ ಕೆಂಪನಂಜೇಗೌಡ ಜನಿಸಿದ. ಈತನನ್ನು ಕೆಂಪನಾಚೇಗೌಡ ಎನ್ನುವುದೂ ಉಂಟು. ಈತನೇ ನಾಡಪ್ರಭು ಕೆಂಪೇಗೌಡರ ತಂದೆ. ಕೆಂಪನಂಜೇಗೌಡ ಮತ್ತು ಲಿಂಗಮಾಂಬೆ ದಂಪತಿಗೆ ನಾಲ್ಕು ಮಂದಿ ಗಂಡು ಮಕ್ಕಳು. ಅವರಲ್ಲಿ ಹಿರಿಮಗನೇ ನಾಡಪ್ರಭುವಾದ ಕೆಂಪೇಗೌಡ. ಯಲಹಂಕದಲ್ಲಿ ಇವರು 1510ರಲ್ಲಿ ಜನಿಸುತ್ತಾರೆ. ಕೆಂಪೇಗೌಡರ ತಂದೆ ಕೆಂಪನಂಜೇಗೌಡ ವಿಜಯನಗರ ಸಾಮ್ರಾಜ್ಯಕ್ಕೆ ಅತ್ಯಂತ ನಿಷ್ಠನಾಗಿದ್ದುದರಿಂದ ಕೃಷ್ಣದೇವರಾಯ ಅವರ ಹಾಗೂ ಅವರ ಆಡಳಿತದ ಕಾರ್ಯ ಶೈಲಿಯನ್ನು ಬಹಳ ಮೆಚ್ಚಿಕೊಂಡಿದ್ದರು.

ಕೆಂಪೇಗೌಡರ ಯುವರಾಜ ಪಟ್ಟಾಭಿಷೇಕ ಮತ್ತು ವಿವಾಹ

1528ರಲ್ಲಿ ಕೆಂಪೇಗೌಡರಿಗೆ ಹಳೆ ಬೆಂಗಳೂರಿನ ಸೋದರಮಾವನ ಮಗಳಾದ ಚೆನ್ನಾಂಬೆಯವರೊಡನೆ (ಚೆನ್ನಮ್ಮ)ಮದುವೆ ಹಾಗೂ ಇದೇ ಸಂಧರ್ಭದಲ್ಲಿ ಯುವರಾಜ ಪಟ್ಟಾಭಿಷೇಕವನ್ನು ಮಾಡಲಾಗುತ್ತದೆ. ಈ ಸುಂದರ ಸಮಾರಂಭಕ್ಕೆ ಶ್ರೀಕೃಷ್ಣದೇವರಾಯರ ಪ್ರತಿನಿಧಿಗಳಾದಿಯಾಗಿ ಚೆನ್ನಪಟ್ಟಣ, ಶಿರಾ, ಸೋಲೂರು, ಕೆಳದಿ, ಚಿತ್ರದುರ್ಗ ಮುಂತಾದ ಸಂಸ್ಥಾನಗಳ ಪಾಳೆಯಗಾರರು ಆಗಮಿಸಿ ಶುಭಕೋರುತ್ತಾರೆ.
ತಂದೆಯವರ ಆಡಳಿತದಲ್ಲಿ ಸಂಪೂರ್ಣ ತೊಡಗಿಕೊಳ್ಳುವ ಯುವರಾಜ ಕೆಂಪೇಗೌಡರಿಗೆ ಕೆಲವೇ ಕಾಲದಲ್ಲಿ ಯಾವುದು ಒಳಿತು, ಯಾವುದು ತಪ್ಪು ಎಂಬಿತ್ಯಾದಿ ರಾಜನೀತಿಯ ಸಕಲ ಪಟ್ಟುಗಳು ಕರಗತವಾಗುತ್ತವೆ. 1529ರಲ್ಲಿ ವಿಜಯನಗರದ ಅರಸು ಶ್ರೀಕೃಷ್ಣದೇವರಾಯರು ನಿಧನರಾದಾಗ ಅನೇಕ ಸಾಮಂತರಾಜರುಗಳು ಸ್ವತಂತ್ರರಾಗುತ್ತಾರೆ. 1530ರಲ್ಲಿ ಕೆಂಪೇಗೌಡರ ಜೇಷ್ಠ ಪುತ್ರನಾಗಿ ಗಿಡ್ಡೇಗೌಡರು ಜನಿಸುತ್ತಾರೆ.

ಯಲಹಂಕ ನಾಡಪ್ರಭುವಾಗಿ

ಮುಪ್ಪಿನಲ್ಲಿದ್ದ ಕೆಂಪನಂಜೇಗೌಡರು ಮಗನಿಗೆ ರಾಜ್ಯವಾಳುವ ಎಲ್ಲಾ ಅರ್ಹತೆಯಿದೆಯೆಂದು ತಿಳಿದು ಮಗ ಕೆಂಪೇಗೌಡರಿಗೆ 1531ರಲ್ಲಿ ನಾಡಪ್ರಭುಗಳ ಅಧಿಕಾರ ವಹಿಸಿಕೊಡುತ್ತಾರೆ. ವಿಜಯನಗರದ ಅರಸರು ಹಿಂದಿನಿಂದಲೂ ತಮ್ಮ ವಂಶಸ್ಥರ ಮೇಲಿಟ್ಟಿದ್ದ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುವ ಕೆಂಪೇಗೌಡರು ಉಳಿದ ಸಾಮಂತರಂತೆ ಸ್ವತಂತ್ರರಾಗಲೊಪ್ಪುವುದಿಲ್ಲ. ಬದಲಿಗೆ ವಿಜಯನಗರ ಸಾಮ್ರಾಜ್ಯಕ್ಕೆ ತಮ್ಮ ನಿಷ್ಠೆಯನ್ನು ಮುಂದುವರೆಸುತ್ತಾರೆ. ಗೌಡರ ಅಧಿಕಾರಕ್ಕೆ ಬಂದ ಕಾಲಕ್ಕೆ ಯಲಹಂಕನಾಡಿನಲ್ಲಿ ಗಂಭೀರ ಪರಿಸ್ಥಿತಿಯಿತ್ತು. ನೆರೆಯ ಪಾಳೇಗಾರರರು ಅಸೂಯೆಯಿಂದ ಕುದಿಯುತ್ತಿದ್ದರು. ಅತ್ತ ವಿಜಯನಗರದ ಗಡಿಯಲ್ಲಿ ಬಹಮನಿ ಸುಲ್ತಾನರ ಸೈನ್ಯದ ಕೋಟಲೆ ಹೆಚ್ಚಿತ್ತು. ವಿಜಯನಗರದ ಅಖಂಡತೆಯನ್ನು ಕಾಪಾಡಲು ಸದಾ ಸಿದ್ದವಾಗಿದ್ದ ಗೌಡರು ಸೋದರ ಸೋಮೇಗೌಡ ಮತ್ತು ಬಸವೇಗೌಡರ ಜೊತೆ ಸೇರಿ ಹಲವು ಯುದ್ದಗಳನ್ನು ಜಯಿಸುತ್ತಾರೆ.

Join WhatsApp Join Telegram

ರಾಜಧಾನಿಯ ನಿರ್ಮಾಣಕ್ಕೆ ಸ್ಥಳದ ಆಯ್ಕೆ

ಬಾಲ್ಯದಿಂದ ಶ್ರೀಕೃಷ್ಣದೇವರಾಯರ ಆಡಳಿತಾವಧಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಿರಿಯನ್ನು ಕಣ್ಣಾರೆ ಕಂಡಿದ್ದ ಕೆಂಪೇಗೌಡರಿಗೆ ತಮ್ಮ ನಾಡಿನಲ್ಲೂ ಈ ಎಲ್ಲಾ ವೈಭವಗಳನ್ನು ಮರು ಪ್ರತಿಷ್ಠಾಪಿಸುವ ಬಯಕೆ ಮನೆ ಮಾಡಿತ್ತು. ಇದರಿಂದಾಗಿ ಹಲವು ಬಾರಿ ಹಂಪಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆಗಳೆಲ್ಲವನ್ನೂ ಮನದಟ್ಟು ಮಾಡಿಕೊಂಡು ಬಂದಿದ್ದರು.

ನಗರ ನಿರ್ಮಾಣಕ್ಕೆ ಸೂಕ್ತ ಜಾಗವನ್ನರಸುತ್ತಾ ಅಮಾತ್ಯ ವೀರಣ್ಣ ಹಾಗೂ ಕೆಲ ಸೈನಿಕರೊಂದಿಗೆ ಯಲಹಂಕದಿಂದ ದಕ್ಷಿಣಕ್ಕೆ ಹತ್ತು ಮೈಲು ದೂರ ದಾಟಿ ಎತ್ತರದ ಪ್ರದೇಶವೊಂದಕ್ಕೆ ಬರುವ ಕೆಂಪೇಗೌಡರಿಗೆ ಸಣ್ಣ-ಪುಟ್ಟ ತೊರೆಗಳಿಂದ ಕೂಡಿದ ಹಸಿರಿನಿಂದ ನಳನಳಿಸುತ್ತಿದ್ದ ಕಾಡು ಎದುರಾಗುತ್ತದೆ. ಕಾಡಿನ ನಡುವೆ ಸಾಗುತ್ತಿದ್ದಂತೆ ಒಂದು ವಿಸ್ಮಯಕಾರಿ ಘಟನೆ ಕೆಂಪೇಗೌಡರ ಎದುರಿನಲ್ಲೇ ನಡೆಯುತ್ತದೆ. ಪುಟ್ಟ ಮೊಲವೊಂದು ತನ್ನನ್ನು ತಿನ್ನಲೆಂದು ಬಂದ ಬೇಟೆ ನಾಯಿಯೊಂದನ್ನು ಓಡಿಸಿಕೊಂಡು ಹೋಗುತ್ತಿರುವುದು ಕೆಂಪೇಗೌಡರಿಗೆ ಕಂಡುಬರುತ್ತದೆ.

ಇಲ್ಲಿರುವ ಸಾಮಾನ್ಯ ಮೊಲವೊಂದಕ್ಕೆ ಇಷ್ಟು ಧೈರ್ಯವಿರಬೇಕಾದರೆ ಇದು ಖಂಡಿತ ವೀರಭೂಮಿಯೇ ನಿಜ ಎನಿಸುತ್ತದೆ. ಹೀಗಾಗಿ ನಗರ ನಿರ್ಮಾಣಕ್ಕೆ ಇದೇ ಸೂಕ್ತವಾದ ಪ್ರದೇಶವೆಂದು ಕೆಂಪೇಗೌಡರು ಭಾವಿಸುತ್ತಾರೆ. ಅಲ್ಲದೆ ನಾನಾಕಡೆಗಳಿಂದ ತೊರೆಗಳಾಗಿ ಹರಿದು ಅರ್ಕಾವತಿ ನದಿಗೆ ಸೇರುತ್ತಿದ್ದ ಪ್ರದೇಶವೂ ಇದಾದ್ದರಿಂದ ನೀರಾವರಿಗೂ ಯೋಗ್ಯವಾಗಿದೆಯೆಂದು ಗೌಡರು ತೀರ್ಮಾನಿಸುತ್ತಾರೆ. ತಮ್ಮ ಪರಿವಾರದ ಹಿರಿಯರೊಂದಿಗೆ ಸಮಾಲೋಚಿಸಿ ಒಪ್ಪಿಗೆ ಪಡೆಯುತ್ತಾರೆ.

ಜ್ಯೋತಿಷಿಗಳನ್ನೂ, ಭೂಗರ್ಭ-ನೀರಾವರಿ ತಜ್ಞರನ್ನೂ ವಾಸ್ತುಶಿಲ್ಪಿಗಳನ್ನೂ ಕರೆಸಿ ಸ್ಥಳ ಮತ್ತು ಪರಿಸರದ ಪರಿಶೀಲನೆ ಮಾಡಿಸಿ ಮಾಹಿತಿ ಪಡೆಯುತ್ತಾರೆ. ರಾಜಧಾನಿಯ ನಿರ್ಮಾಣದ ಅನುಮತಿಗಾಗಿ ವಿಜಯನಗರದ ಅರಸರ ಅಚ್ಯುತರಾಯರನ್ನು ಭೇಟಿ ಮಾಡುತ್ತಾರೆ. ಸಂತಸಗೊಂಡ ಅರಸರು ಗೌಡರ ಕಾರ್ಯಕ್ಕೆ ಶುಭಕೋರಿ ಅಗತ್ಯ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿ ಕಳುಹಿಸುತ್ತಾರೆ.

ರಾಜಧಾನಿಯ ನಿರ್ಮಾಣಕ್ಕೆ ಧನ ಸಂಗ್ರಹ

ಯಲಹಂಕ ನಾಡಿನ ಸಾಮಂತರಾಗಿದ್ದ ಕೆಂಪೇಗೌಡರಿಗೆ ವಿಜಯನಗರದ ಅರಸ ಅಚ್ಯುತರಾಯರು 1532ರಲ್ಲಿ ಯಲಹಂಕ ಸೇರಿದಂತೆ ಹಳೆಯ ಬೆಂಗಳೂರು, ವರ್ತೂರು, ಬೇಗೂರು, ಹಲಸೂರು, ಕೆಂಗೇರಿ, ತಲಘಟ್ಟಪುರ, ಜಿಗಣಿ, ಕನ್ನಲ್ಲಿ, ಕುಂಬಳಗೋಡು, ಬಾಣಾವರ ಮತ್ತು ಹೆಸರುಘಟ್ಟ ಹೋಬಳಿಗಳನ್ನು ಯಲಹಂಕ ಅಮರನಾಯಕತನಕ್ಕೆ ಬಿಟ್ಟು ಕೊಟ್ಟಿರುತ್ತಾರೆ.

ಈ ಎಲ್ಲ ಪ್ರದೇಶಗಳಿಂದ ಸಂಗ್ರಹವಾಗುತ್ತಿದ್ದ ರಾಜಾದಾಯದಲ್ಲಿ ಸ್ವಲ್ಪ ಪ್ರಮಾಣದ ಹಣವನ್ನು ಮಾತ್ರ ಸಾಮಂತರು ಬಳಸಿಕೊಂಡು ಉಳಿದಿದ್ದನ್ನು ವಿಜಯನಗರದ ಅರಸರ ಸನ್ನಿಧಾನಕ್ಕೆ ಒಪ್ಪಿಸಬೇಕಿತ್ತು. ರಾಜಧಾನಿಯ ನಿರ್ಮಾಣ ಕಾರ್ಯಕ್ಕೆ ಅಪಾರ ಹಣದ ಅವಶ್ಯಕತೆ ಇದ್ದಿದ್ದರಿಂದಾಗಿ ಗೌಡರು ಅಗತ್ಯವಾದ ಧನ ಸಹಾಯ ಮಾಡಬೇಕೆಂದು ತಮ್ಮ ವ್ಯಾಪ್ತಿಯ ಪ್ರದೇಶದ ಜನತೆಯಲ್ಲಿ ಮನವಿ ಮಾಡಿಕೊಳ್ಳುತ್ತಾರೆ.

ಮನವಿಗೆ ಓಗೊಟ್ಟ ಹಲಸೂರು, ಜಿಗಣಿ, ಬಾಣಾವರ, ಬೇಗೂರು, ತಲಘಟ್ಟಪುರ, ಕುಣಿಗಲ್ ಮತ್ತಿತರ ಕಡೆಗಳಿಂದ ಸ್ವಲ್ಪ ಪ್ರಮಾಣದ ಹಣ ಹರಿದು ಬರುತ್ತದೆ. ಉಳಿದಂತೆ ನಿರ್ಮಾಣ ಕಾರ್ಯಕ್ಕೆ ಬೇಕಾದ ಸಾಮಗ್ರಿಗಳನ್ನು ಗಾಡಿಗಳ ಮೂಲಕ ಕೆಲವರು ತಲುಪಿಸುತ್ತಾರೆ ಮತ್ತು ಕೋಟೆಯ ನಿರ್ಮಾಣದಲ್ಲಿ ನೆರವಾಗಲು ನೂರಾರು ಮಂದಿ ಸ್ವಪ್ರೇರಿತರಾಗಿ ಮುಂದೆ ಬರುವುದಾಗಿ ಗೌಡರಿಗೆ ಧೈರ್ಯ ನೀಡುತ್ತಾರೆ.

ಆಸ್ಥಾನದ ಪ್ರಮುಖರೊಂದಿಗೆ ಚರ್ಚಿಸಿ ಗುರುತಿಸಿದ ಪ್ರದೇಶದಲ್ಲಿ ಕೋಟೆ, ಪೇಟೆ, ಗುಡಿ, ಕೆರೆ ಮತ್ತು ಉದ್ಯಾನ ಈ ಐದು ಅಂಗಗಳಿಂದ ಕೂಡಿದ ರಾಜಧಾನಿಯ ನಿರ್ಮಾಣಕ್ಕೆ ನೀಲಿನಕ್ಷೆ ತಯಾರಿಸುತ್ತಾರೆ. ನಂತರ ಪುರೋಹಿತರಿಂದ ನಗರ ನಿರ್ಮಾಣಕ್ಕೆ ಮುಹೂರ್ತವನ್ನು ನಿಗದಿ ಮಾಡಿಸುತ್ತಾರೆ. ಅಮಾತ್ಯರಾಗಿದ್ದ ಗಿಡ್ಡೇಗೌಡರನ್ನು ವಿಜಯನಗರಕ್ಕೆ ತೆರಳಿ ಅರಸರನ್ನು ಕಂಡು ನಗರ ನಿರ್ಮಾಣಕ್ಕೆ ಸ್ವಲ್ಪ ಮಟ್ಟಿನ ಹಣಕಾಸಿನ ನೆರವು ನೀಡುವಂತೆ ಕೋರಿಕೊಂಡು ಬರುವಂತೆ ಕಳುಹಿಸುತ್ತಾರೆ.

ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರು

ಎಲ್ಲವೂ ಅಂದುಕೊಂಡಂತೆ ನಡೆದುದರ ಪರಿಣಾಮ ಕೆಂಪೇಗೌಡರ ಕನಸಿನ ಬೆಂಗಳೂರು ನಗರದ ನಿರ್ಮಾಣ ಕಾರ್ಯ 1537ರಲ್ಲಿ ನಾಡಿನ ಪ್ರಮುಖರ ಸಮ್ಮುಖದಲ್ಲಿ ಗುದ್ದಲಿ ಪೂಜೆಯೊಂದಿಗೆ ಶುರುವಾಗುತ್ತದೆ. ಮೂಲತಃ ಕೃಷಿಕ ಕುಟುಂಬದಿಂದ ಬಂದವರಾದ ಕೆಂಪೇಗೌಡರು ಹೊನ್ನಾರು ಕಟ್ಟುವ ಆಚರಣೆಯಿಂದ ರಾಜಧಾನಿಯ ನಿರ್ಮಾಣ ಕಾರ್ಯ ಆರಂಭಿಸುತ್ತಾರೆ. ಅರ್ಚಕರು ನಿರ್ಧರಿಸಿದಂಥ ಶುಭಕಾಲದಲ್ಲಿ ಈಗಿನ ದೊಡ್ಡಪೇಟೆ ಮತ್ತು ಚಿಕ್ಕಪೇಟೆ ರಸ್ತೆಗಳು ಸಂಧಿಸುವ ಪ್ರದೇಶದಲ್ಲಿ ನಾಲ್ಕು ನೇಗಿಲಿಗೆ ಆರು ಕಟ್ಟಿ ತಯಾರಾಗಿ ನಿಂತಿದ್ದ ನಾಲ್ವರು ರೈತರನ್ನೂ ನಾಲ್ಕು ದಿಕ್ಕಿಗೆ ಸಾಗುವಂತೆ ತಿಳಿಸಿದರು. ಎತ್ತುಗಳು ನಿಂತ ಜಾಗವೇ ಎಲ್ಲೆಯೆಂದು ತಿಳಿದುಕೊಳ್ಳುವ ತೀರ್ಮಾನಕ್ಕೆ ಬರಲಾಗಿತ್ತು. ಪೂರ್ವಕ್ಕೆ ಹಲಸೂರು ಬಾಗಿಲು, ಪಶ್ಚಿಮಕ್ಕೆ ಅರಳೇ ಪೇಟೆ, ಉತ್ತರದಲ್ಲಿ ಯಲಹಂಕ ಮತ್ತು ದಕ್ಷಿಣದಲ್ಲಿ ಆನೆಕಲ್ (ಸಿಟಿ ಮಾರುಕಟ್ಟೆ) ಬಾಗಿಲವರೆಗೆ ಈ ಎತ್ತುಗಳು ಸಾಗಿ ನಿಂತವು ಅಲ್ಲೆಲ್ಲ ಗುರುತಿಗಾಗಿ ಕಲ್ಲುಗಳನ್ನು ನೆಡಲಾಯಿತು. ಈ *ಜಾಗಗಳಲ್ಲಿ ಪ್ರಮುಖ ಪ್ರವೇಶದ್ವಾರಗಳನ್ನು ನಿರ್ಮಿಸಲು ತೀರ್ಮಾನಿಸಲಾಯಿತು. ಕೋಟೆಯ ಹೆಬ್ಬಾಗಿಲು ಈಗಿನ ವಿಕ್ಟೋರಿಯಾ ಆಸ್ಪತ್ರೆಯ ಬಳಿಯ ಕೋಟೆಯಲ್ಲಿತ್ತು. ರಾಜಧಾನಿಗೆ ನವದ್ವಾರಗಳಿರಬೇಕು, ದೇವಾಲಯಗಳಲ್ಲಿ ಪ್ರತಿದಿನವೂ ಪೂಜೆಗಳು ನಡೆಯುತ್ತಿರಬೇಕು ಮತ್ತು ಒಂಬತ್ತು ಕೆರೆಗಳು ಸದಾ ಕಾಲ ನೀರಿನಿಂದ ತುಂಬಿರಬೇಕೆಂಬುದು ಗೌಡರ ಆಶಯವಾಗಿತ್ತು, ಗೌಡರ ಇಚ್ಛೆಯಂತೆ ಕೋಟೆಗೆ ನಾಲ್ಕು ಮಹಾದ್ವಾರಗಳನ್ನೂ, ಐದು ಕಿರಿ ದ್ವಾರಗಳನ್ನು ನಿರ್ಮಿಸಲಾಯಿತು. ಮತ್ತು ರಕ್ಷಣೆಗಾಗಿ ಕೆಲ ರಹಸ್ಯ ದ್ವಾರಗಳನ್ನು ಇಡಲಾಯಿತು.

ಕೆಂಪೇಗೌಡರ ನಿಧನ

ನಾಡುಕಟ್ಟುವುದರಲ್ಲಿ ನಿಸ್ಸೀಮನಾಗಿದ್ದ ಕೆಂಪೇಗೌಡ ಮೈಸೂರಿನ ಪಿರಿಯಾಪಟ್ಟಣ, ಕಲ್ಲಹಳ್ಳಿ, ನಂಜರಾಯಪಟ್ಟಣ, ಕೊಡಗು ಮುಂತಾದ ಪ್ರಾಂತ್ಯಗಳು ಸೇರಿದಂತೆ ಉಮ್ಮತ್ತೂರಿನ ಆಡಳಿತಕ್ಕೆ ಒಳಪಟ್ಟಿದ್ದ ಶಿವನಸಮುದ್ರ ಸೀಮೆಯವರೆಗೂ ತನ್ನ ಆಳ್ವಿಕೆಯನ್ನು ವಿಸ್ತರಿಸಿದ್ದರು. ಇದರಿಂದ ಯಲಹಂಕ ನಾಡು ದಕ್ಷಿಣದ ಗಡಿ ಕಾವೇರಿ ತೀರದವರೆಗೂ ವಿಸ್ತಾರಗೊಂಡಿತ್ತು. 1531ರಲ್ಲಿ ಪಟ್ಟಾಭಿಷಕ್ತರಾಗಿ ಅಧಿಕಾರಕ್ಕೆ ಬಂದ ನಾಡಪ್ರಭು ಕೆಂಪೇಗೌಡರು. 1569ರವರೆಗೆ ಸುಮಾರು ೩೮ ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದರು. ಮಾಗಡಿ ಬಳಿಯ ಕೆಂಪಾಪುರದಲ್ಲಿ 1569ರಲ್ಲಿ ಇಹಲೋಕ ತ್ಯಜಿಸಿದರು. ಮಾಗಡಿ ಬಳಿಯ ತಿಪ್ಪಸಂದ್ರ ಹ್ಯಾಂಡ್‌ಪೊಸ್ಟ್ ಮತ್ತು ಕೆಂಚನಹಳ್ಳಿ ನಡುವೆ ಇರುವ ಕೆಂಪಾಪುರ ಗ್ರಾಮದಲ್ಲಿ ಕೆಂಪೇಗೌಡರ ಸಮಾಧಿ ದೊರೆತಿದೆ.

FAQ

ಬೆಂಗಳೂರು ನಗರದ ನಿರ್ಮಾತೃ ಯಾರು ?

ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರು.

ಕೆಂಪೇಗೌಡರು ಯಾವಾಗ ನಿಧನ ಹೊಂದಿದರು ?

ಕೆಂಪಾಪುರದಲ್ಲಿ 1569ರಲ್ಲಿ ಮರಣ ಹೊಂದಿದರು.

ಇತರೆ ವಿಷಯಗಳು :

ಚಂದ್ರಶೇಖರ ಕಂಬಾರ ಅವರ ಜೀವನ ಚರಿತ್ರೆ

ಗ್ರಂಥಾಲಯದ ಮಹತ್ವ ಪ್ರಬಂಧ 

Leave your vote

-1 Points
Upvote Downvote

Leave a Reply

Your email address will not be published. Required fields are marked *

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.